ಸರ್ಕಾರಿ ಶಾಲೆಗಳಲ್ಲಿ LKG-UKG ಆರಂಭ.
ಕರ್ನಾಟಕ ರಾಜ್ಯದಲ್ಲಿ ಈ ಶೈಕ್ಷಣಿಕ ವರ್ಷದಿಂದ ಸರ್ಕಾರಿ ಶಾಲೆಗಳಲ್ಲಿ LKG ಮತ್ತು UKG ತರಗತಿಗಳನ್ನು ಆರಂಭಿಸುವ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಇದರಿಂದ ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳ ಮಕ್ಕಳಿಗೆ ಉಚಿತ ಹಾಗೂ ಗುಣಮಟ್ಟದ ಪೂರ್ವ ಪ್ರಾಥಮಿಕ ಶಿಕ್ಷಣ ದೊರೆಯಲಿದೆ. ಈ ಯೋಜನೆಯ ಮುಖ್ಯ ಅಂಶಗಳು, ಪ್ರಯೋಜನಗಳು ಮತ್ತು ಸರ್ಕಾರದ ಉದ್ದೇಶಗಳ ಸಂಪೂರ್ಣ ವಿವರವನ್ನು ಇಲ್ಲಿ ತಿಳಿಯೋಣ.
ಬೆಳಿಗ್ಗೆ 10 ರಿಂದ ಸಂಜೆ 3:30 ರವರೆಗೆ ಈ ತರಗತಿಗಳು ನಡೆಯಲಿದ್ದು, ವಿದ್ಯಾರ್ಥಿಗಳಿಗೆ ಉಚಿತ ಅಭ್ಯಾಸ ಪುಸ್ತಕಗಳನ್ನು ವಿತರಿಸಲಾಗುತ್ತದೆ.
ಸರ್ಕಾರಿ ಶಾಲೆಗಳ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ ಈವರೆಗೆ ಖಾಸಗಿ ಶಾಲೆಯಲ್ಲಿ ಲಭ್ಯವಿದ್ದಂತಹ LKG ಮತ್ತು UKG ತರಗತಿಗಳು ಈಗ ಸರ್ಕಾರಿ ಶಾಲೆಗಳಲ್ಲಿ ಆರಂಭವಾಗಲಿದೆ.
ಮುಖ್ಯ ಅಂಶಗಳು
1 ಮಕ್ಕಳಿಗೆ ಮೂಲಭೂತ ಶಿಕ್ಷಣ ಅಕ್ಷರ ಸಂಖ್ಯೆಗಳು ಚಟುವಟಿಕೆ ಆಧಾರಿತ ಕಲಿಕೆ.
2 ತರಬೇತಿ ಪಡೆದ ಶಿಕ್ಷಕರ ನೇಮಕ.
3 ಉಚಿತ ಶಿಕ್ಷಣ ಬಡ ಕುಟುಂಬಗಳ ಮಕ್ಕಳಿಗೆ ಅನುಕೂಲ.
ಏಕೆ ಈ ನಿರ್ಧಾರ!
- ಆರ್ಥಿಕವಾಗಿ ಹಿಂದುಳಿದ ಮಕ್ಕಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ.
- ಉತ್ತಮ ಪೂರ್ವ ಮತ್ತು ಪ್ರಾಥಮಿಕ ಶಿಕ್ಷಣ ಸಿಗಬೇಕು ಎಂಬ ಮುಖ್ಯ ಗುರಿ.
- ಸಣ್ಣ ವಯಸ್ಸಿನಲ್ಲೇ ಮಕ್ಕಳಲ್ಲಿ ಭಾಷಾ ಕೌಶಲ್ಯ ಸಂಖ್ಯೆಗಳ ಅರಿವು ಸಾಮಾಜಿಕ ಮೌಲ್ಯಗಳನ್ನು ಬೆಳೆಸಲು.
- ಮಕ್ಕಳಿಗೆ ಪ್ರತ್ಯೇಕ ತರಗತಿಗಳು ಆಟೋಪಕರಣಗಳು ಮತ್ತು ಕಲಿಕಾ ಸಾಮಗ್ರಿಗಳು ಮತ್ತು ಮಕ್ಕಳಿಗೆ ಕಲಿಕಾ ವಾತಾವರಣ ಸೃಷ್ಟಿಸಲು ಕ್ರಮ ಕೈಗೊಳ್ಳಲಾಗುತ್ತಿದೆ.
- ಮಕ್ಕಳಿಗೆ ಕನ್ನಡ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಅಭ್ಯಾಸ ಮಾಡಲು ಅವಕಾಶ ಕಲ್ಪಿಸಿದೆ.
- ಶಿಕ್ಷಣ ಕ್ಷೇತ್ರದಲ್ಲಿ ಇದೊಂದು ಮಹತ್ವದ ಹೆಜ್ಜೆಯಾಗಿದ್ದು ಸರ್ಕಾರಿ ಶಾಲೆಗಳ ಮೇಲಿನ ಜನರ ವಿಶ್ವಾಸ ಹೆಚ್ಚಿಸುವಲ್ಲಿ ಸಹಾಯಕವಾಗಲಿದೆ.
ಈ ಕ್ರಮದಿಂದ ಗ್ರಾಮೀಣ ಹಾಗೂ ಹಿಂದುಳಿದ ಪ್ರದೇಶಗಳ ಮಕ್ಕಳಿಗೂ ಉತ್ತಮ ಪ್ರಾರಂಭಿಕ ಶಿಕ್ಷಣ ದೊರೆಯಲಿದೆ. ಇದು ಮಕ್ಕಳ ಭವಿಷ್ಯ ನಿರ್ಮಾಣಕ್ಕೆ ಭದ್ರಬುನಾದಿಯಾಗಿದೆ.
ಎಲ್ಲಾ ಮಕ್ಕಳಿಗೂ ಸಮಾನ ಹಾಗೂ ಗುಣಮಟ್ಟದ ಶಿಕ್ಷಣ ನೀಡುವುದು ಇದರ ಪ್ರಮುಖ ಉದ್ದೇಶವಾಗಿದೆ , ಖಾಸಗಿ ಶಾಲೆಗಳ ಹೆಚ್ಚುತ್ತಿರುವ ಶುಲ್ಕದ ಹೊರೆ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ತೊಂದರೆ ಆಗುತ್ತಿದೆ ಈ ಸರ್ಕಾರಿ ಶಾಲೆಗಳಲ್ಲಿ ಎಲ್ ಕೆ ಜಿ ಮತ್ತು ಯು ಕೆ ಜಿ ಆರಂಭವಾದದರಿಂದ ಈ ಸಮಸ್ಯೆಗೆ ಪರಿಹಾರ ಸಿಕ್ಕಂತಾಗಿದೆ, ಉಚಿತ ಅಭ್ಯಾಸ ಪುಸ್ತಕಗಳು ಮತ್ತು ಅಗತ್ಯ ಸಾಮಗ್ರಿಗಳನ್ನು ಸರ್ಕಾರ ಉಚಿತವಾಗಿ ವಿತರಿಸಲಾಗುತ್ತದೆ.
ಇದು ಒಂದು ಕ್ರಾಂತಿಕಾರಿ ಹೆಜ್ಜೆ ಆಗಿದೆ ಸರ್ಕಾರಿ ಶಾಲೆಗಳಲ್ಲಿ ಎಲ್ ಕೆ ಜಿ ಮತ್ತು ಯು ಕೆ ಜಿ ಆರಂಭವು ಮಕ್ಕಳ ಭವಿಷ್ಯ ನಿರ್ಮಾಣಕ್ಕೆ ಭದ್ರವಾದ ಅಡಿಪಾಯವಾಗಿದ್ದು ಸಮಾನ ಶಿಕ್ಷಣದ ಕನಸನ್ನು ನನಸಾಗಿಸುವ ಮಹತ್ವದ ಪ್ರಯತ್ನವಾಗಿದೆ.

